ಸರಿಸಿಬಿಡು ಮೂಢಮನ ಆವರಿತ ಪೊರೆಯಾ|
ತೆರೆದುಬಿಡು ಕಿಟಕಿಯನು ಒಳಬರಲಿ ಬೆಳಕು||
ರೂಢಿರಾಡಿಯಲಿ ಸಿಲುಕಿ ತೊಳಲಾಡುತಿಹೆ ನಾನು|
ಕರುಣೆದೋರೈ ದೇವ ಸತ್ಪಥದಿ ಮುನ್ನಡೆಸು||
ಸರ್ವರೊಳ್ಳಿತ ಬಯಸಿ ಸ್ವಂತಹಿತ ಕಡೆಗಿಟ್ಟೆ|
ಸರ್ವದೂಷಿತನಾಗಿ ನೆಲೆಗಾಣದಿದೆ ಮನವು||
ಅರಿಗಳಾರರ ಬಂದಿ ದಿಕ್ಕೆಟ್ಟು ಕುಳಿತಿರುವೆ|
ಸದ್ಗುರುವೆ ಕೃಪೆದೋರಿ ಹಿಡಿದೆತ್ತಿ ಸಂತಯಿಸು||
ಪಂಡಿತನು ನಾನಲ್ಲ ಪಾಂಡಿತ್ಯವೆನಗಿಲ್ಲ|
ಒಳಮನದ ನುಡಿಯೊಂದೆ ಆಸರೆಯು ನನಗೆಲ್ಲ||
ಹುಲುಮನುಜ ನಾನಾಗಿ ಭಾವಬಂಧಿಯು ನಾನು|
ಸಮಚಿತ್ತ ಕರುಣಿಸೈ ನೆಮ್ಮದಿಯ ನೀನೀಡು||
**********************
-ಕವಿನಾಗರಾಜ್.
[ಇದನ್ನು ಶ್ರೀಮತಿ ಲಲಿತಾರಮೇಶರು ವೇದಭಾರತಿಯ ಕಾರ್ಯಕ್ರಮವೊಂದರಲ್ಲಿ ಹಾಡಿದ್ದರು. ಇದರ ಲಿಂಕ್ ಇದು:http://vedajeevana.blogspot.in/2011/06/srchttpplayer.html]
3 Comments
ತುಂಬಾ ಚೆನ್ನಾಗಿದೆ…..
ಇದರ ಹಾಡನ್ನು ಕೆಳಗಿನ ಸಂಪರ್ಕ ಕೊಂಡಿಯಲ್ಲಿ ಕೇಳಬಹುದು
https://vimeo.com/19814385
ಧನ್ಯವಾದಗಳು, ಪ್ರಮೋದರೇ.
ಒಳಮನದ ನುಡಿಯೊಂದೆ ಆಸರೆಯು ನನಗೆಲ್ಲ|
ಇದು ಎಲ್ಲರಿಗೂ ಅನ್ವಯಿಸುತ್ತೆ, ಅದಕ್ಕಾಗಿ ಇದು ಕಾವ್ಯ.