ಹಿರಿಯ ಸಾಹಿತಿ, ಚಿಂತಕ ಎಲ್.ಎಸ್. ಶೇಷಗಿರಿರಾವ್ ಇನ್ನಿಲ್ಲ

ಹಿರಿಯ ಸಾಹಿತಿ ಎಲ್.ಎಸ್. ಶೇಷಗಿರಿರಾವ್ ಅವರು ಶುಕ್ರವಾರ ನಿಧನರಾದರು. ಅವರಿಗೆ 94 ವರ್ಷ ವಯಸ್ಸಾಗಿತ್ತು. ಕಾದಂಬರಿ-ಸಾಮಾನ್ಯ ಮನುಷ್ಯ, ಆಲಿವರ್ ಗೋಲ್ಡ್‌ಸ್ಮಿತ್, ಇಂಗ್ಲಿಷ್ ಭಾಷೆಯಲ್ಲಿ ಆಧುನಿಕ ಸಾಹಿತ್ಯ ವಿಮರ್ಶೆ, ಪಾಶ್ಚಾತ್ಯ ಸಾಹಿತ್ಯ ವಿಹಾರ, ಸಾಹಿತ್ಯ ವಿಶ್ಲೇಷಣೆ, ಇಂಗ್ಲಿಷ್ ಸಾಹಿತ್ಯ ಚರಿತ್ರೆ ಮುಂತಾದ ವಿಮರ್ಶಾ ಕೃತಿಗಳು, ಇದು ಜೀವನ, ಜಗದ ಜಾತ್ರೆಯಲ್ಲಿ, ಮುಟ್ಟಿದ ಗುರಿ ಮತ್ತು ಇತರ ಕಥೆಗಳು, ಮುಯ್ಯಿ ಎಂಬ ಕಥಾಸಂಕಲನಗಳನ್ನು ರಚಿಸಿದ್ದಾರೆ.ಹಂಪಿ ವಿಶ್ವವಿದ್ಯಾಲಯಕ್ಕೆ ಇಂಗ್ಲಿಷ್-ಕನ್ನಡ, ಕನ್ನಡ– ಕನ್ನಡ, ನಿಘಂಟನ್ನು ರಚಿಸಿಕೊಟ್ಟಿದ್ದಾರೆ. 2007ರಲ್ಲಿ ಉಡುಪಿಯಲ್ಲಿ ನಡೆದ 74ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆವಹಿಸಿದ್ದರು. ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಅನಕೃ ಪ್ರತಿಷ್ಠಾನ ಪ್ರಶಸ್ತಿ, ಕಾವ್ಯಾನಂದ ಪುರಸ್ಕಾರ, ಬಿ.ಎಂ.ಶ್ರೀ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

courtsey:prajavani.net

https://www.prajavani.net/stories/stateregional/senior-literature-ls-seshagirirao-died-691900.html

Leave a Reply