ಇತಿಹಾಸಕಾರ ಷ.ಶೆಟ್ಟರ್ ನಿಧನ

ಬೆಂಗಳೂರು:  ಅಂತರರಾಷ್ಟ್ರೀಯ ಖ್ಯಾತಿಯ ಇತಿಹಾಸಕಾರ ಷ.ಶೆಟ್ಟರ್ (85) ಶುಕ್ರವಾರ ನಸುಕಿನ 3 ಗಂಟೆಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶ್ವಾಸಕೋಶದಲ್ಲಿ ನೀರು ತುಂಬಿಕೊಂಡು, ಉಸಿರಾಟಕ್ಕೆ ಸಮಸ್ಯೆಯಾಗಿತ್ತು. ಬನ್ನೇರುಘಟ್ಟ ರಸ್ತೆಯ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಂಡತಿ ಮತ್ತು ಇಬ್ಬರು ಹೆಣ್ಣುಮಕ್ಕಳು ಇದ್ದಾರೆ. ಭೂಪಸಂದ್ರದ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆ ಬಗ್ಗೆ ಈವರೆಗೆ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಕುಟುಂಬದ ಮೂಲಗಳು ಹೇಳಿವೆ.ಹೊಸಕೋಟೆಯಲ್ಲಿ ಅವರಿಗೆ ಸೇರಿದ ಜಾಗ ಅಥವಾ ಚಾಮರಾಜಪೇಟೆಯ ಚಿತಾಗಾರದಲ್ಲಿ ಲಿಂಗಾಯತ ಸಂಪ್ರದಾಯದಂತೆ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ವಿಳಾಸ:  ಹೊಯ್ಸಳ ಶ್ರೀಕೃಷ್ಣ ಅಪಾರ್ಟ್‌ಮೆಂಟ್, ಕಲ್ಪನಾ ಚಾವ್ಲಾ ರಸ್ತೆ, ಭೂಪಸಂದ್ರ. ಸಂಪರ್ಕಕ್ಕೆ ರಾಮ್– 80886.  ಷ.ಶೆಟ್ಟರ್ ಬದುಕಿನ ಹಾದಿ, ಹುಟ್ಟಿದ್ದು 11ನೇ ಡಿಸೆಂಬರ್ 1935. ಬಳ್ಳಾರಿ ಜಿಲ್ಲೆ ಹಂಪಸಾಗರದಲ್ಲಿ. ಮೈಸೂರು, ಧಾರವಾಡ ಮತ್ತು ಕೇಂಬ್ರಿಜ್‌ಗಳಲ್ಲಿ ಉನ್ನತ ವ್ಯಾಸಂಗ. ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳಗನ್ನಡ ಕುರಿತು 27ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳ ಪ್ರಕಟಣೆ. ಹಿರಿಯ ಇತಿಹಾಸಕಾರ ಮತ್ತು, ಸಂಶೋಧಕ‌ ಡಾ.ಎಸ್.ಶೆಟ್ಟರ್ ಅವರ ಸಾವಿನಿಂದ‌ ಭಾರತೀಯ ವಿದ್ವತ್ ಲೋಕ ಬಡವಾಗಿದೆ. ಅವರು ಇನ್ನಷ್ಟು ಕಾಲ ಮಾರ್ಗದರ್ಶಕರಾಗಿ ನಮ್ಮ ಜೊತೆ ಇರಬೇಕಾಗಿತ್ತು. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು, ಅವರ ಶೋಕದಲ್ಲಿ ನಾನೂ ಭಾಗಿ.  February 28, 2020 ವಿವಿದ ವಿಶ್ವವಿದ್ಯಾಲಯದಲ್ಲಿ ಬೋಧನೆ 1960–96; ಭಾರತೀಯ ಕಲಾ ಇತಿಹಾಸ ಸಂಸ್ಥೆಯ ನಿರ್ದೇಶಕತ್ವ 1978–95, ನವದೆಹಲಿಯ ಇಂಡಿಯನ್‌ ಕೌನ್ಸಿಲ್‌ ಆಫ್‌ ಹಿಸ್ಟಾರಿಕಲ್‌ ರಿಸರ್ಚ್‌ ಅಧ್ಯಕ್ಷ ಸ್ಥಾನ 1996–99, ಬೆಂಗಳೂರು ನ್ಯಾಷನಲ್‌ ಇನ್ಸ್‌ಟಿಟ್ಯೂಟ್‌ ಆಪ್‌ ಅಡ್ವಾನ್ಸ್‌ಡ್‌ ಸ್ಟಡೀಸ್‌ನಲ್ಲಿ ಡಾ. ಎಸ್‌ ರಾಧಾಕೃಷ್ಣ್‌ ಪ್ರಾಧ್ಯಾಪಕತ್ವ 2002–2010, 2010ರಿಂದ ಇದೇ ಸಂಸ್ಥೆಯಲ್ಲಿ ಸಂದರ್ಶಕ ಪ್ರಾಧ್ಯಾಪಕ, ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ದಕ್ಷಿಣ ಭಾರತ ಶಾಖೆಯ ನಿರ್ದೇಶಕತ್ವ 2005–2013. ಭಾರತೀಯ ಇತಿಹಾಸ ಅನುಸಂಧಾನ ಪರಿಷತ್‌, ದಕ್ಷಿಣ ಭಾರತೀಯ ಇತಿಹಾಸ ಅನುಸಂಧಾನ ಪರಿಷತ್‌, ಕರ್ನಾಟಕ ಇತಿಹಾಸ ಅನುಸಂಧಾನ ಪರಿಷತ್‌ಗಳ ಸರ್ವಾಧ್ಯಕ್ಷ ಸ್ಥಾನ, ಮೆಲ್ಬೋರ್ನ್‌ (ಆಸ್ಟ್ರೇಲಿಯಾ) ವಿಶ್ವ ಸಂಸ್ಕೃತ ಸಮ್ಮೇಳನದ ವಿಭಾಗೀಯ ಅಧ್ಯಕ್ಷ ಸ್ಥಾನ, ಬಳ್ಳಾರಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ಹಾಗೂ ಅಖಿಲ ಭಾರತ ಹಳಗನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತ್ವ. ಕುಂದಕುಂದ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್‌, ಮಾಸ್ತಿ ಪ್ರಶಸ್ತಿ, ರನ್ನ ಪ್ರಶಸ್ತಿ, 2016ರ ಶಾಸ್ತ್ರೀಯ ಕನ್ನಡ ವಾಙ್ಮಯದ ರಾಷ್ಟ್ರಪತಿ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಸಂದಿವೆ. ಸದ್ಯ ಬೆಂಗಳೂರಿನಲ್ಲಿ ಹಳಗನ್ನಡ ಮತ್ತು ವಚನ ಸಾಹಿತ್ಯದ ಓದು ಸಂಶೋಧನೆಯಲ್ಲಿ ಅವರು ತೊಡಗಿಕೊಂಡಿದ್ದರು.

courtsey:prajavani.net

https://www.prajavani.net/district/bengaluru-city/historian-sha-shettar-no-more-708685.html

 

Leave a Reply