ಇವರು ಜನಿಸಿದ್ದು 1902 ಆಗಸ್ಟ್ 18ರಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ಜನಿಸಿದರು. ಸೀತಾರಾಮ್ ಅವರ ಪ್ರಾರಂಭಿಕ ಶಿಕ್ಷಣ ಆಂಗ್ಲೋವರ್ನಾಕ್ಯುಲರ್ ಶಾಲೆಯಲ್ಲಿ ನಡೆಯಿತು. ಹೈಸ್ಕೂಲು ಹಾಗೂ ಜ್ಯೂನಿಯರ್ ಕಾಲೇಜು ವಿದ್ಯಾಭ್ಯಾಸ ಶಿವಮೊಗ್ಗದಲ್ಲಿ ನಡೆಯಿತು. ಬೆಂಗಳೂರಿನ ಸೆಂಟ್ರಲ್ ಕಾಲೇಜಿನಿಂದ ಬಿ.ಎಸ್ಸಿ ಪದವಿ ಗಳಿಸಿದರು.
ಆನಂದರು ಮಕ್ಕಳಿಗಾಗಿ ಭಾಷಾಂತರಿಸಿದ ಕಥೆಗಳು ‘ಈ ಸೋಪನ ನೀತಿಕಥೆಗಳು’. ಇವರು ಬರೆದ ಮತ್ತೆರಡು ಕೃತಿಗಳೆಂದರೆ ಗದ್ಯಗೀತಾತ್ಮಕ ವಚನ ಸಂಗ್ರಹ ‘ಪಕ್ಷಿಗಾನ’ ಮತ್ತು ಪ್ರಬಂಧ ಸಂಕಲನ ‘ಆನಂದ ಲಹರಿ’. ಆನಂದರಿಗೆ ಮುದ್ದಣ ಸ್ಮಾರಕ ಸಣ್ಣಕಥಾ ಸ್ಪರ್ಧೆಯಲ್ಲಿ ಸುವರ್ಣಪದಕ’ವಲ್ಲದೆ ಬೆಂಗಳೂರು, ಮೈಸೂರು ಕಾಲೇಜುಗಳಲ್ಲಿ ಕಾರ್ಯಕ್ರಮಕ್ಕೆ ಆಹ್ವಾನಿಸಿ ಸನ್ಮಾನಿಸಲಾಗಿತ್ತು. ಆನಂದರ ಕೆಲ ಕಥೆಗಳು ಹಿಂದಿ ಹಾಗೂ ಇಂಗ್ಲಿಷ್ ಭಾಷೆಗೆ ಅನುವಾದಗೊಂಡಿವೆ. ‘ನಾನು ಕೊಂದ ಹುಡುಗಿ’ ಕಥೆಯು ‘ಲಡ್ಕಿ ಜಿಸ್ಕಿ ಮೈನೆ ಹತ್ಯಾಕೀ’ ಎಂದು ಹಿಂದಿ ಭಾಷೆಗೂ; ರಾಧೆಯ ಕ್ಷಮೆ, ಮಾಟಗಾತಿ, ಕೊನೇ ಎಂಟಾಣೆ ಮುಂತಾದ ಕಥೆಗಳು ಇಂಗ್ಲಿಷ್ ಭಾಷೆಗೂ ಅನುವಾದಗೊಂಡಿವೆ. ಪತ್ರಿಕೆಗಳಿಗೆ ಆಗಾಗ್ಗೆ ಬರೆದ ಕಥೆಗಳು ಭವತಿ ಭಿಕ್ಷಾಂದೇಹಿ, ಚಂದ್ರಗ್ರಹಣ, ಜೋಯಿಸರ ಚೌಡಿ, ಮಾಟಗಾತಿ, ಸ್ವಪ್ನಜೀವಿ, ಸಂಸಾರಶಿಲ್ಪ, ಶಿಲ್ಪಸಂಕುಲ ಎಂಬ ಏಳು ಕಥಾ ಸಂಕಲನಗಳಲ್ಲಿ ಸೇರಿವೆ.