ಬಸು ಬೇವಿನಗಿಡದ ಅವರು ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷ್‌ನಲ್ಲಿ ಸ್ನಾತಕೋತ್ತರ ಪದವೀಧರರು. ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಬೇಂದ್ರೆ ಕಾವ್ಯ ಪ್ರಬಂಧ ಮಂಡನೆ ಮಾಡಿ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಪ್ರಸ್ತುತ ಧಾರವಾಡ ಆಕಾಶವಾಣಿಯಲ್ಲಿ ಕಾರ್ಯಕ್ರಮ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಕೃತಿಗಳು: ತಾಯವ್ವ, ಬಾಳೆಯ ಕಂಬ, ಹೊಡಿ ಚಕ್ಕಡಿ, ಉಗುಳುಬುಟ್ಟಿ , ನೆರಳಿಲ್ಲದ ಮರ, ಬೀಳದ ಗಡಿಯಾರ (ಕಥಾ ಸಂಕಲನಗಳು), ಕನಸು, ಇಳೆಯ ಅರ್ಥ (ಕವನ ಸಂಕಲನಗಳು), ದಕ್ಕದ ಕಾಡು (ಅನುವಾದಿತ ಕಥೆಗಳ ಸಂಕಲನ) ಬಿ.ಎ. ಸನದಿ (ಜೀವನಚಿತ್ರ) , ನಾಳೆಯ ಸೈರ್ಯ, ಓಡಿ ಹೋದ ಹುಡುಗ (ಮಕ್ಕಳ ಕಾದಂಬರಿಗಳು), ಹಕ್ಕಿಗಮನದ ದಾರಿ, ಕಲ್ಲುಸಕ್ಕರೆ, ಕಾಲದ ಕನ್ನಡಿ (ವಿಮರ್ಶೆ ಸಂಕಲನಗಳು), ಇವರ ನೆರಳಿಲ್ಲದ ಮರ, ಓಡಿ ಹೋದ ಹುಡುಗ ಹಾಗೂ ಭಾರತೀಯ ಸಮಕಾಲೀನ ಕಥೆಗಳು (ಅನುವಾದಿತ ಕೃತಿ) ಕನ್ನಡ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನ ದೊರೆತಿದೆ.