ಬೇಲೂರು ರಾಮಮೂರ್ತಿ 1950 ಜೂನ್ 30ರಲ್ಲಿ ಜನಿಸಿದರು. ಅವರು ಮೂಲತಃ ಮೈಸೂರಿನವರು. ತಮ್ಮ ಹಾಸ್ಯ ಲೇಖನಗಳ ಮೂಲಕ ಕನ್ನಡ ಸಾಹಿತ್ಯದಲ್ಲಿ ಚಿರಪರಿಚಿತರು. ಅವರು ‘ಕಥಾ ಕುಸುಮ, ಕಥಾ ಕನ್ನಡಿ, ಕಥಾ ಬಿಂಬ, ಆಕಾಶದಿಂದ ಧರೆಗೆ’ ಅವರ ಕತಾ ಸಂಕಲನಗಳು. ‘ಪ್ರಬಂಧ, ನಾಟಕ, ಕಾದಂಬರಿ, ಹಾಸ್ಯ’ ಪ್ರಕಾರಗಳಲ್ಲಿ ಕೃಷಿ ಸಾಧಿಸಿದ್ದಾರೆ. ಅನರ್ಘ್ಯ ಪ್ರೇಮ, ಅಗೋಚರ, ಜೋಡಿರಾಗ, ಅಪರಾಧಿ ನಾನಲ್ಲ, ಸುಮಂಗಲೆ, ಹೀಗೊಂದು ಸಾರ್ಥಕ ಬದುಕು, ಅಮೃತಗಾನ, ಅತಿಥಿ, ಶರ್ಮಿಳ, ಅಗ್ನಿಜ್ವಾಲೆ, ಅಭಿಷೇಕ, ಅರುಂಧತಿ, ಸಂಬಂಧ ರಾಗ, ಸ್ವರಸಂಗಮ, ತೂಗುಸೇತುವೆ, ಮುತ್ತಿನ ತೆನೆ, ಸಮಾಗಮ, ಕಾಣದ ಊರಲಿ, ಎಂದೂ ನಿನ್ನವನೇ, ಪ್ರೇಮನಿವೇದನೆ, ಬದುಕು ಎಂದರೆ ಹೀಗೇ, ಕಡಲಂಚಿನ ಚಂದ್ರಮ, ನಲ್ಮೆಯ ನೆಲೆ’ ಅವರ ಕಿರು ಕಾಂಬರಿಗಳು. ‘ಬೊಂಬಾಟ್ ಬೀಛಿ, ಮಿಡಿ ಮಿಡಿ ಕಾಮಿಡಿ’ ಅವರ ಹಾಸ್ಯ ಕೃತಿಗಳು.