ಗೀತಾ ಅವರು ಹುಟ್ಟಿದ್ದು ಶಿರಸಿಯ ಎಕ್ಕಂಬಿ ಸಮೀಪದ ಕಾಡನಡುವಿನ ಒಂಟಿಮನೆ ಕಾಟೀಮನೆಯಲ್ಲಿ 1976 ಏಪ್ರಿಲ್ 20 ರಂದು . ಈಗ ತುಮಕೂರು ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ‘ಚೌಕಟ್ಟಿನಾಚೆಯವರು’ ಇವರ ಪ್ರಮುಖ ಕಥಾ ಸಂಕಲನ. ’ಹೊಸಿಲಾಚೆ ಹೊಸ ಬದುಕು , ಪರಿಮಳದ ಬೀಜ’ ಗೀತಾ ವಸಂತ ಅವರ ಕವನಸಂಕಲನಗಳು. ಬೆಳಕಿನ ಬೀಜ, ಬೇಂದ್ರೆ ಕಾವ್ಯ – ಅವಧೂತ ಪ್ರಜ್ಞೆ, ಹೊಸ ದಿಗಂತದ ಹೊಸದಾರಿ ಇವರ ಪ್ರಮುಖ ವಿಮರ್ಶಾ ಕೃತಿಗಳು, ಪಾಟೀಲಪುಟ್ಟಪ್ಪ ಕಥಾ ಪ್ರಶಸ್ತಿ, ದೇವಾಂಗನಾ ಶಾಸ್ತ್ರಿ ಸಾಹಿತ್ಯ ಪ್ರಶಸ್ತಿ, ಕರ್ನಾಟಕ ವಿದ್ಯಾವರ್ಧಕ ಸಂಘದಿಂದ ರತ್ನಮ್ಮ ಹೆಗಡೆ ಪ್ರಶಸ್ತಿಗಳು ದೊರೆತಿವೆ.