ಜೋಗಿ ಅವರು ಹುಟ್ಟಿದ್ದು 1965 ನವೆಂಬರ್ 16ರಂದು. ಮೂಲತಃ ಸೂರತ್ಕಲ್ ಸಮೀಪದ ಹೊಸಬೆಟ್ಟು ಊರಿನವರಾದ ಇವರು ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.
ಜೋಗಿ, ಜಾನಕಿ, ಎಚ್. ಗಿರೀಶ್ ರಾವ್, ಸತ್ಯವ್ರತ…… ಹೀಗೆ ವಿವಿಧ ಅಂಕಿತನಾಮಗಳ ಮೂಲಕವೇ ಓದುಗರನ್ನು ತಲುಪಿದವರು ಗಿರೀಶ್ ರಾವ್ ಹತ್ವಾರ್ (ಜೋಗಿ). ವೃತ್ತಿಯಲ್ಲಿ ಪತ್ರಕರ್ತರಾಗಿರುವ ನದಿಯ ನೆನಪಿನ ಹಂಗು, ಯಾಮಿನಿ, ಚಿಟ್ಟೆ ಹೆಜ್ಜೆ ಜಾಡು, ಹಿಟ್ ವಿಕೆಟ್, ಊರ್ಮಿಳಾ, ಮಾಯಾಕಿನ್ನರಿ, ಗುರುವಾಯನಕೆರೆ, ದೇವರ ಹುಚ್ಚು, ಚಿಕ್ಕಪ್ಪ, ಚೈತ್ರ ವೈಶಾಖ ವಸಂತ, ಎಲ್ಲಾನು ಮಾಡುವುದು ಹೊಟ್ಟೆಗಾಗಿ, ವಿರಹದ ಸಂಕ್ಷಿಪ್ತ ಪದಕೋಶ, ಬೆಂಗಳೂರು, ಬಿ ಕ್ಯಾಪಿಟಲ್, ಸೀಳುನಾಲಿಗೆ, ಜೋಗಿ ಕತೆಗಳು, ಕಾಡು ಹಾದಿಯ ಕತೆಗಳು, ರಾಯಭಾಗದ ರಹಸ್ಯ ರಾತ್ರಿ, ಜರಾಸಂಧ, ಸೂಫಿ ಕತೆಗಳು, ಕಥಾ ಸಮಯ, ಫೇಸ್ ಬುಕ್ ಡಾಟ್ ಕಾಮ್-ಮಾನಸಜೋಶಿ, ನಾಳೆ ಬಾ, ಅಶ್ವಥ್ಥಾಮನ್, ಎಲ್ (ಕಾದಂಬರಿ), ಆಸ್ಕ್ ಮಿಸ್ಟರ್, ಜೋಗಿ ಕಾಲಂ, ನೋಟ್ ಬುಕ್, ಜೋಗಿ, ಹಸ್ತಿನಾವತಿ ಮುಂತಾದ ಕೃತಿಗಳನ್ನು ರಚಿಸಿದ್ದಾರೆ.