ಕಾತ್ಯಾಯಿನಿ ಕುಂಜಿಬೆಟ್ಟು ಅವರ ಹುಟ್ಟೂರು ಉಡುಪಿಯ ಕಾಪು ಬಳಿಯ ಕರಂದಾಡಿ.ಪಳಕಳ ಸೀತಾರಾಮ ಭಟ್ಟರ ಸಮಗ್ರ ಕೃತಿಗಳ ಕುರಿತು ನಡೆಸಿದ ಸಂಶೋಧನಾ ಪ್ರಬಂಧಕ್ಕೆ ಮಣಿಪಾಲ ವಿಶ್ವವಿದ್ಯಾಲಯದಿಂದ ಪಿಹೆಚ್ಡಿ ಪದವಿ; ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ‘ಗುಳಿಯಪ್ಪ’ ಮಕ್ಕಳ ನಾಟಕಕ್ಕೆ ಪ್ರಥಮ ಬಹುಮಾನ (2016), ‘ಪಗಡೆಹಾಸು’ ನಾಟಕಕ್ಕೆ ಕರ್ನಾಟಕ ನಾಟಕ ಅಕಾಡೆಮಿಯ ಬಹುಮಾನ (2017) ಹಾಗೂ ರಾಜ್ಯ ಯುವ ಬರಹಗಾರರ ಒಕ್ಕೂಟದ ಒಂದನೇ ರಾಜ್ಯ ಸಮ್ಮೇಳನದ ಸರ್ವಾಧ್ಯಕ್ಷೆ (2018)ಯಾಗಿದ್ದರು.