ಕೇಶವ ಮಳಗಿ ಅವರು ಮೂಲತಃ ಬಳ್ಳಾರಿ ಜಿಲ್ಲೆಯವರು. ಕನ್ನಡದ ಪ್ರಮುಖ ಕಥೆಗಾರರಲ್ಲಿ ಒಬ್ಬರಾಗಿರುವ ಮಳಗಿ ಅವರು 80ರ ದಶಕದಲ್ಲಿ ತಮ್ಮ ಬರವಣಿಗೆ ಆರಂಭಿಸಿದರು. ಆಪ್ತವಾಗಿ ಕತೆ ಹೇಳುವಂತೆ ಬರೆಯುವ ಮಳಗಿ ಅವರ ‘ಕಡಲ ತೆರೆಗೆ ದಂಡೆ’, ‘ಮಾಗಿ ಮೂವತ್ತೈದು’, ‘ವೆನ್ನೆಲ ದೊರೆಸಾನಿ’, ‘ಹೊಳೆ ಬದಿಯ ಬೆಳಗು’ ಸಂಕಲನಗಳು ಪ್ರಕಟವಾಗಿವೆ. ‘ಕುಂಕುಮ ಭೂಮಿ’, ‘ಅಂಗಧ ಧರೆ’ ಅವರ ಕಾದಂಬರಿಗಳಾದರೆ ‘ನೇರಳೆ ಮರ’ ರೂಪಕ ಲೋಕ ಕಥನ ನಿರೂಪಿಸುತ್ತದೆ.ಕನ್ನಡದ ಪ್ರಮುಖ ಕಥೆಗಾರರಲ್ಲಿ ಒಬ್ಬರಾಗಿರುವ ಮಳಗಿ ಅವರು 80ರ ದಶಕದಲ್ಲಿ ತಮ್ಮ ಬರವಣಿಗೆ ಆರಂಭಿಸಿದರು. ತಮ್ಮ ವಿಶಿಷ್ಟ ನುಡಿಗಟ್ಟು, ಶೈಲಿ, ದನಿ ಬನಿಯ ಕತೆಗಳಿಂದ ಕನ್ನಡ ಓದುಗರಿಗೆ ಚಿರಪರಿಚಿತ ಇರುವ ಮಳಗಿ ಅವರು ಜನಸಾಮಾನ್ಯರು ಬದುಕನ್ನು ಘನತೆ, ಪ್ರೀತಿಯಿಂದ ಜೀವಿಸುವ ರೀತಿಯನ್ನು ಕತೆಗಳಲ್ಲಿ ಚಿತ್ರಿಸುತ್ತಾರೆ