ಡಾ. ಪ್ರಭಾಕರ್ ನೀರ್ಮಾರ್ಗ ಅವರು ಕನ್ನಡದ ಕಾದಂಬರಿಕಾರ. ಜೊತೆಗೆ, ನೂರಾರು ಕತೆ, ಕವನ, ನಾಟಕಗಳನ್ನೂ ಬರೆದಿದ್ದಾರೆ.ವೃತ್ತಿಯಲ್ಲಿ ಶಿಕ್ಷಕರಾಗಿ, ಮಂಗಳೂರು ವಿಶ್ವವಿದ್ಯಾಲಯದ ಉಪಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ, ಮಂಗಳೂರಿನ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾಗಿದ್ದಾರೆ.
ಇವರು ತುಳು ಜಾನಪದ ಲೋಕವನ್ನು ತಮ್ಮ ಕೃತಿಗಳ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಅನಾವರಣ ಮಾಡಿದವರು. ಹಾಗಾಗಿ ತುಳುನಾಡಿನ, ಸಾಂಸ್ಕೃತಿಕ, ಸಾಮಾಜಿಕ, ಧಾರ್ಮಿಕ, ಆರಾಧನಾ ಆಯಾಮಗಳು ಇವರ ಬರವಣಿಗೆಗಳಲ್ಲಿ ಕಾಣಸಿಗುತ್ತವೆ. ಇವರು ಕನ್ನಡ ಸಾಹಿತ್ಯ ಲೋಕಕ್ಕೆ 27 ಕೃತಿಗಳನ್ನು ನೀಡಿದ್ದಾರೆ.
ಕೃತಿಗಳು: ಧರ್ಮಚಾವಡಿ, ಕಾಲಚಕ್ರ, ಕಣ್ಮಣಿ, ದಾಯಿತ್ವ, ಕಾರ್ಣಿಕ, ಮದಿಪು, ವೇಷ, ತರಬಲ ಮೊದಲಾದವು.