ಹಾಯ್… ಅಂಗೋಲಾ
ಪ್ರವಾಸ ಕಥನ
ಪ್ರಸಾದ್ ನಾಯ್ಕ್
ಒಂದು ಪ್ರವಾಸ ಕಥನ ಹೇಗಿರಬೇಕು ಎನ್ನುವುದಕ್ಕೆ ಮಾದರಿಯಾಗುವಂತೆ ಈ ಅಂಗೋಲಾ ಕಥನ ಮೂಡಿಬಂದಿದೆ. ದೇಶ ಅಂದರೆ ಅಮೆರಿಕಾ, ಇಂಗ್ಲೆಂಡ್, ಆಸ್ಟ್ರೇಲಿಯಾ ಎಂದಷ್ಟೇ ಕಾಣಿಸುತ್ತಿರುವ ಪ್ರವಾಸ ಕಥನಗಳ ಸಾಲಿನಲ್ಲಿ ಮೊಟ್ಟಮೊದಲ ಬಾರಿಗೆ ಅಂಗೋಲಾ ಸೇರಿಕೊಳ್ಳುತ್ತಿದೆ. ಪ್ರಸಾದ್ ನಾಯ್ಕ್ ಗೆ ಅಂಗೋಲಾ ಆಯ್ಕೆಯಾಗಿರಲಿಲ್ಲ. ಒಬ್ಬ ನಿಪುಣ ಎಂಜಿನಿಯರ್ ಗೆ ಕೇಂದ್ರ ಸರ್ಕಾರದ ಜಲ ಸಂಪನ್ಮೂಲ ಇಲಾಖೆ ಕೆಲಸ ಮಾಡಲು ತೋರಿಸಿದ ಜಾಗ ಮಾತ್ರ ಆಗಿತ್ತು. ಆದರೆ, ಪ್ರಸಾದ್ ನಾಯ್ಕ್ ಅಂಗೋಲಾದ ಆತ್ಮವನ್ನು ಹೊಕ್ಕಿರುವ ರೀತಿ ಎಲ್ಲರಿಗೂ ಬೆರಗು ಮೂಡಿಸುವಂತಿದೆ. ಯಾವುದೋ ದೇಶ, ಯಾವುದೋ ಊರು, ಯಾವುದೋ ಭಾಷೆ ಎಂದು ಪ್ರಸಾದ್ ನಾಯ್ಕ್ ಕೊರಗುತ್ತಾ ಕೂರಲಿಲ್ಲ. ಬದಲಿಗೆ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಆ ದೇಶದ ಮೂಲೆ ಮೂಲೆ ಸುತ್ತಿದ್ದಾರೆ. ಭಾಷೆ ಗೊತ್ತಿಲ್ಲದೆ, ಸಂಸ್ಕೃತಿ ಗೊತ್ತಿಲ್ಲದೆ ಅಲ್ಲಿನ ಜನರೊಡನೆ ಸಂವಾದಿಸಿದ್ದಾರೆ. ಊರು-ಕೇರಿ ತಿರುಗಿ ಅವರ ಸಂಸ್ಕೃತಿ ಅರಿತಿದ್ದಾರೆ. ಹುಡುಗಿಯರೊಂದಿಗೆ ಲಲ್ಲೆ ಹೊಡೆದಿದ್ದಾರೆ. ಅಂತಹ ಇನ್ನೂ ಬೆಳಕು ಕಾಣದ ದೇಶದಲ್ಲೂ ನೀರು ಉಕ್ಕಲು ತಮ್ಮ ಕೊಡುಗೆ ನೀಡಿದ್ದಾರೆ.
Reviews
There are no reviews yet.