ಸುಮಾರು ಎಂಭತ್ತು-ತೊಂಬತ್ತು ವರ್ಷಗಳ ಹಿಂದೆ ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಒಂದಾಗಿ ಹೋರಾಡುತ್ತಿತ್ತು. ಈ ವಿಷಯದಲ್ಲಿ ಕರ್ನಾಟಕವೂ ಹಿಂದೆ ಬಿದ್ದಿರಲಿಲ್ಲ. ರಾಜಕೀಯದಷ್ಟೇ ಸಾಂಸ್ಕೃತಿಕವಾಗಿಯೂ ತನ್ನ ಹಿರಿಮೆಯನ್ನು ಕರ್ನಾಟಕ ಮೆರೆದಿತ್ತು. ಉತ್ತರ ಕರ್ನಾಟಕದಲ್ಲಿ ಅನೇಕ ಹಿರಿ-ಕಿರಿಯ ಲೇಖಕರು, ಬರಹಗಾರರು ತಮ್ಮ ಬರಹಗಳ ಮೂಲಕ ಜನ ಜಾಗೃತಿಯಲ್ಲಿ ತೊಡಗಿದ್ದರು. ದ.ರಾ. ಬೇಂದ್ರೆ ಪ್ರಮುಖರಲ್ಲಿ ಒಬ್ಬರು. ತಮ್ಮ ಸಮಾನ ಮನಸ್ಕರ ಜತೆ ಸೇರಿಕೊಂಡು ಗೆಳೆಯರ ಗುಂಪು ಸ್ಥಾಪಿಸಿದರು. ಈ ಗೆಳೆಯರ ಗುಂಪಿನ ಸಾಧನೆ ಇಂದಿಗೂ ಒಂದು ಇತಿಹಾಸ. ಸ್ವಲ್ಪೇ ದಿನ ಕಾರ್ಯ ವಹಿಸಿದರೂ ಗೆಳೆಯರ ಗುಂಪು ಸಾಂಸ್ಕೃತಿಕವಾಗಿ ಬಹು ದೊಡ್ಡ ಹೆಸರನ್ನು ಮಾಡಿತು. ಈ ಗುಂಪಿನ ಸದಸ್ಯರೆಲ್ಲ ನಂತರ ದಿನಗಳಲ್ಲಿ ಪ್ರಖ್ಯಾತ ಲೇಖಕರಾದರು. ಸಾಧನೆ ಇಲ್ಲಿಯೇ ನಿಲ್ಲಲಿಲ್ಲ. ದ.ರಾ. ಬೇಂದ್ರೆ ನಂತರದ ದಿನಗಳಲ್ಲೂ ನೂರಾರು ಲೇಖಕರಿಗೆ ಮಾರ್ಗದರ್ಶಕರಾದರು. ಸ್ವಧರ್ಮ ಮತ್ತು ಜಯ ಕರ್ನಾಟಕ ಪತ್ರಿಕೆಗಳು ಗೆಳೆಯರ ಗುಂಪಿನ ಪತ್ರಿಕೆಗಳು. ನಾಡ ಹಬ್ಬ ಆಚರಿಸಿದ ಹೆಮ್ಮೆ ಗೆಳೆಯರ ಗುಂಪಿಗೆ. ಈ ಎಲ್ಲ ಸಾಧನೆ, ಆದರ್ಶಗಳೇ ಮನೋಹರ ಗ್ರಂಥಮಾಲೆಯ ಸ್ಥಾಪನೆಗೆ ಕಾರಣವಾದವು.
ಸಂಗೀತ ಲೋಕದ ಸಂತ ಬಿಸ್ಮಿಲ್ಲಾ ಖಾನ್
Original price was: ₹200.00.₹180.00Current price is: ₹180.00.ತಂಬಿಟ್ಟು
Original price was: ₹140.00.₹126.00Current price is: ₹126.00.ಶೂರ್ಪಾಲಿಯ ಆಚಾರ್ಯರು
Original price was: ₹60.00.₹54.00Current price is: ₹54.00.ಗಡಿ ದಾಟಿದವರು
Original price was: ₹130.00.₹117.00Current price is: ₹117.00.ಕೈತಾನ್ ಗಾಂಧಿಯ ಸ್ವಾತಂತ್ರ್ಯ ಹೋರಾಟ
Original price was: ₹90.00.₹81.00Current price is: ₹81.00.ನವ್ಯ ಕಾವ್ಯ ಪ್ರಯೋಗ
Original price was: ₹120.00.₹108.00Current price is: ₹108.00.ಅರ್ಥಾಂತರ
Original price was: ₹75.00.₹68.00Current price is: ₹68.00.ಪ್ರತ್ಯಭಿಜ್ಞಾನ
Original price was: ₹150.00.₹135.00Current price is: ₹135.00.ಕನ್ನಡ ಸಾಹಿತ್ಯ ಸಂಗಾತಿ
Original price was: ₹450.00.₹405.00Current price is: ₹405.00.ಯುಗಧರ್ಮ ಹಾಗೂ ಸಾಹಿತ್ಯ ದರ್ಶನ
Original price was: ₹425.00.₹383.00Current price is: ₹383.00.