ಸುಮಾರು ಎಂಭತ್ತು-ತೊಂಬತ್ತು ವರ್ಷಗಳ ಹಿಂದೆ ಇಡೀ ರಾಷ್ಟ್ರವೇ ಸ್ವಾತಂತ್ರ್ಯಕ್ಕಾಗಿ ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಒಂದಾಗಿ ಹೋರಾಡುತ್ತಿತ್ತು. ಈ ವಿಷಯದಲ್ಲಿ ಕರ್ನಾಟಕವೂ ಹಿಂದೆ ಬಿದ್ದಿರಲಿಲ್ಲ. ರಾಜಕೀಯದಷ್ಟೇ ಸಾಂಸ್ಕೃತಿಕವಾಗಿಯೂ ತನ್ನ ಹಿರಿಮೆಯನ್ನು ಕರ್ನಾಟಕ ಮೆರೆದಿತ್ತು. ಉತ್ತರ ಕರ್ನಾಟಕದಲ್ಲಿ ಅನೇಕ ಹಿರಿ-ಕಿರಿಯ ಲೇಖಕರು, ಬರಹಗಾರರು ತಮ್ಮ ಬರಹಗಳ ಮೂಲಕ ಜನ ಜಾಗೃತಿಯಲ್ಲಿ ತೊಡಗಿದ್ದರು. ದ.ರಾ. ಬೇಂದ್ರೆ ಪ್ರಮುಖರಲ್ಲಿ ಒಬ್ಬರು. ತಮ್ಮ ಸಮಾನ ಮನಸ್ಕರ ಜತೆ ಸೇರಿಕೊಂಡು ಗೆಳೆಯರ ಗುಂಪು ಸ್ಥಾಪಿಸಿದರು. ಈ ಗೆಳೆಯರ ಗುಂಪಿನ ಸಾಧನೆ ಇಂದಿಗೂ ಒಂದು ಇತಿಹಾಸ. ಸ್ವಲ್ಪೇ ದಿನ ಕಾರ್ಯ ವಹಿಸಿದರೂ ಗೆಳೆಯರ ಗುಂಪು ಸಾಂಸ್ಕೃತಿಕವಾಗಿ ಬಹು ದೊಡ್ಡ ಹೆಸರನ್ನು ಮಾಡಿತು. ಈ ಗುಂಪಿನ ಸದಸ್ಯರೆಲ್ಲ ನಂತರ ದಿನಗಳಲ್ಲಿ ಪ್ರಖ್ಯಾತ ಲೇಖಕರಾದರು. ಸಾಧನೆ ಇಲ್ಲಿಯೇ ನಿಲ್ಲಲಿಲ್ಲ. ದ.ರಾ. ಬೇಂದ್ರೆ ನಂತರದ ದಿನಗಳಲ್ಲೂ ನೂರಾರು ಲೇಖಕರಿಗೆ ಮಾರ್ಗದರ್ಶಕರಾದರು. ಸ್ವಧರ್ಮ ಮತ್ತು ಜಯ ಕರ್ನಾಟಕ ಪತ್ರಿಕೆಗಳು ಗೆಳೆಯರ ಗುಂಪಿನ ಪತ್ರಿಕೆಗಳು. ನಾಡ ಹಬ್ಬ ಆಚರಿಸಿದ ಹೆಮ್ಮೆ ಗೆಳೆಯರ ಗುಂಪಿಗೆ. ಈ ಎಲ್ಲ ಸಾಧನೆ, ಆದರ್ಶಗಳೇ ಮನೋಹರ ಗ್ರಂಥಮಾಲೆಯ ಸ್ಥಾಪನೆಗೆ ಕಾರಣವಾದವು.
ಶ್ರಾವಣ ಪ್ರತಿಭೆ
Original price was: ₹500.00.₹300.00Current price is: ₹300.00.ಬಿ. ಆರ್. ವಾಡಪ್ಪಿ ಲಲಿತ ಪ್ರಬಂಧಗಳ ಸಂಗ್ರಹ
Original price was: ₹400.00.₹240.00Current price is: ₹240.00.ಸೀತಾರಣ್ಯ ಪ್ರವೇಶ
Original price was: ₹130.00.₹78.00Current price is: ₹78.00.ಕೈತಾನ ಗಾಂಧಿಯ ಸ್ವಾತಂತ್ರ್ಯ ಹೋರಾಟ
Original price was: ₹90.00.₹54.00Current price is: ₹54.00.ಸೋನಾಟಾ, ಧರ್ಮಪುತ್ರ ವಾಸಾಂಸಿ ಜೀರ್ಣಾನಿ
Original price was: ₹120.00.₹72.00Current price is: ₹72.00.ಸೇಡಿಯಾಪು ನೆನಪುಗಳು
Original price was: ₹110.00.₹66.00Current price is: ₹66.00.