ಶ್ರೀ ವಿಷ್ಣು ಸಹಸ್ರ ನಾಮ
ಶ್ರೀ ಗುರುಭ್ಯೋ ನಮಃ ಹರಿಃ ಓಂ ಮಹಾಭಾರತ ಯುದ್ಧ ಮುಗಿದಿದೆ. ಭೀಷ್ಮಾಚಾರ್ಯರು ಶರಶಯ್ಯದಲ್ಲಿದ್ದಾರೆ ಧರ್ಮರಾಯನ ಪಟ್ಟಾಭಿಷೇಕ ಶ್ರೀಕೃಷ್ಣ ಮತ್ತು ವ್ಯಾಸರ ಸಮ್ಮುಖದಲ್ಲಿ ನಡೆದಿದೆ. ಒತ್ತಾಯದಲ್ಲಿ ಪಟ್ಟಾಭಿಷೇಕಕ್ಕೆ ಒಪ್ಪಿದ್ದ ಯುಧಿಷ್ಠಿರನ ಮನಸ್ಸಿಗೆ ಕಿಂಚಿತ್ತೂ ಸಮಾಧಾನವಿಲ್ಲ. ಎಲ್ಲಾ ವೀರರುˌ ಹಿರಿಯರುˌ ಲಕ್ಷ-ಲಕ್ಷ ಮಂದಿ ಸೈನಿಕರ ನಾಶದ ನಂತರ ಸಿಂಹಾಸನವೇರಿದ ಆತನಿಗೆ ಪಾಪ ಪ್ರಜ್ಞೆ ಕಾಡುತ್ತಿರುತ್ತದೆ. ಇಂತಹ ಸ್ಥಿತಿಯಲ್ಲಿದ್ದ ಧರ್ಮರಾಯನನ್ನು ಶ್ರೀಕೃಷ್ಣ ಭೀಷ್ಮಾಚಾರ್ಯರ ಬಳಿಗೆ ಕರೆತಂದು ಆತನಿಗೆ ಧರ್ಮ ಪಾಠವನ್ನು ಬೋಧಿಸುವಂತೆ ಕೇಳಿಕೊಳ್ಳುತ್ತಾನೆ. ಧರ್ಮದ ಪರ ಹೋರಾಡಿ ಗೆದ್ದ ಧರ್ಮರಾಯನನ್ನು ಕೊಂಡಾಡಿದ ಭೀಷ್ಮಾಚಾರ್ಯರು ಹೇಳುತ್ತಾರೆ: “ಒಂದು ವೇಳೆ ನೀನು ಅನ್ಯಾಯದ ವಿರುದ್ಧ ಯುದ್ಧದಲ್ಲಿ ಹೋರಾಡದೆ ಇದ್ದಿದ್ದರೆ ನಿನ್ನನ್ನು ಹೇಡಿ ಎನ್ನುತ್ತಿದ್ದೆ”. ಈ ಮಾತಿನಿಂದ ಧರ್ಮರಾಯನಲ್ಲಿದ್ದ ಪಾಪಪ್ರಜ್ಞೆ ಹೊರಟುಹೋಗಿˌ ಆತ ತನಗೆ ಧರ್ಮೋಪದೇಶ ಮಾಡಬೇಕೆಂದು ಭೀಷ್ಮಾಚಾರ್ಯರಲ್ಲಿ ಕೇಳಿಕೊಳ್ಳುತ್ತಾನೆ. ಈ ರೀತಿ ಭೀಷ್ಮಾಚಾರ್ಯರು ಧರ್ಮರಾಯನಿಗೆ ಧರ್ಮೋಪದೇಶ ಮಾಡಿದ ಮಹಾಭಾರತದ ಅನುಶಾಸನ ಪರ್ವದ ಕೊನೆಯ ಅಪೂರ್ವ ಉಪದೇಶ ವ್ಯಾಸ ಮಹರ್ಷಿಗಳು ಸಾವಿರ ನಾಮಗಳ ರೂಪದಲ್ಲಿ ನಮಗೆ ಕಾಣಿಕೆಯಾಗಿ ನೀಡಿದ್ದಾರೆ.
(to be contdm)